ಕೊರೊನಾ ಸೊಂಕಿನ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಅತ್ಯುತ್ತಮವಾಗಿ ಬಂದಿದೆ.
ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಶೇ.75.3 ರಷ್ಟು ಪಿಯುಸಿ ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ 66 ವಸತಿ ಶಾಲೆಗಳ 2963 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ಶೇ.86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 289 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ. 76.4 ರಷ್ಟು ಫಲಿತಾಂಶ ಬಂದಿತ್ತು. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.