Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹತ್ಯೆ ಆರೋಪಿಗಳ ಪತ್ತೆಗೆ ಬಹುಮಾನ

ಹತ್ಯೆ ಆರೋಪಿಗಳ ಪತ್ತೆಗೆ ಬಹುಮಾನ
ದಕ್ಷಿಣ ಕನ್ನಡ , ಬುಧವಾರ, 2 ನವೆಂಬರ್ 2022 (18:59 IST)
ದಕ್ಷಿಣ ಕನ್ನಡ ಜಿಲ್ಲೆಯ BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ NIA ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ NIA ಅಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ರೆ ಒಟ್ಟು 14 ಲಕ್ಷ ರೂ ನಗದು ಬಹುಮಾನ ನೀಡುವಾಗಿ NIA ಘೋಷಿಸಿದ್ದು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ. ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ NIA ಪ್ರಕಟಣೆಯಲ್ಲಿ ತಿಳಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯ ಶವ ಪತ್ತೆ