Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪುನೀತ್ ರಾಜ್ಕುಮಾರ್ ನಿಧನರಾಗಿ ಇಂದಿಗೆ 5 ತಿಂಗಳು ಕಳೆದಿದ್ದು, ಐದನೇ ತಿಂಗಳ ಪುಣ್ಯ ತಿಥಿ ಹಿನ್ನಲೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ಪುತ್ರಿ ವಂದಿತಾ ರಾಘವೇಂದ್ರ ರಾಜ್ಕುಮಾರ್, ಕುಟುಂಬಸ್ಥರಿಂದ ಪೂಜಾ ಕಾರ್ಯ ನೆರವೇರಿದೆ. ಜೊತೆಗೆ ಟಾಲಿವುಡ್ ಹಾಗೂ ಬಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪುನೀತ್ ಸಮಾಧಿಗೆ ಭೇಟಿ ನೀಡಿ, ಪುನೀತ್ಗೆ ನಮನ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ಅವರು ಪುನೀತ್ ಒಬ್ಬ ಒಳ್ಳೆ ನಟ ಮಾತ್ರ ಅಲ್ಲ. ಒಬ್ಬ ಒಳ್ಳೆ ವ್ಯಕ್ತಿ ಕೂಡ ಆಗಿದ್ದರು. ಕಿಲ್ಲಿಂಗ್ ವೀರಪ್ಪನ್ ಚಿತ್ರೀಕರಣದ ಸಮಯದಲ್ಲಿ ಎರಡು ಭಾರಿ ಭೇಟಿಯಾಗಿದ್ದೆ ಎಂದು ನುಡಿದಿದ್ದಾರೆ. ಅಪ್ಪು ಸಮಾಧಿಗೆ ನಮನ ಸಲ್ಲಿಸಿದ ನಂತರ ಪಾರ್ವತಮ್ಮ ರಾಜ್ಕುಮಾರ್ ಅವರ ಸಮಾಧಿಗೂ ಆರ್ಜಿವಿ ನಮನ ಸಲ್ಲಿಸಿದ್ದಾರೆ.