Publish Date: Tue, 22 Feb 2022 (14:38 IST)
Updated Date: Tue, 22 Feb 2022 (15:36 IST)
ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಖ್ಯಾತ ಆರ್.ಜೆ ರಚನಾ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ಕಂಠ ಸಿರಿಯಿಂದಲೇ ಫೇಮಸ್ ಆಗಿದ್ದ ರಚನಾ ಏಳು ವರ್ಷಗಳ ಹಿಂದೆ ಆರ್.ಜೆ ವೃತ್ತಿಗೆ ವಿದಾಯ ಹೇಳಿದ್ದರು.
ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು.
ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು.
ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾ ಕರೆಸ್ಟ್ನಿಂದಾಗಿ ನಿಧನರಾಗಿದ್ದಾರೆ.