Publish Date: Fri, 07 Feb 2020 (10:23 IST)
Updated Date: Fri, 07 Feb 2020 (10:29 IST)
ಬೆಂಗಳೂರು : ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ ಘಟನೆ ಬೆಂಗಳೂರಿನ ಆಡುಗೋಡಿ ಸಿಗ್ನಲ್ ಬಳಿ ನಡೆದಿದೆ.
ಗಂಗಾಧರ್ ಮೃತಪಟ್ಟ ವ್ಯಕ್ತಿ. ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೆ ಸಾವನಪ್ಪಿದ್ದಾರೆ.
ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.