Publish Date: Sun, 18 Feb 2018 (10:32 IST)
Updated Date: Sun, 18 Feb 2018 (10:42 IST)
ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಶನಿವಾರ ರಾತ್ರಿ ಯುಬಿ ಸಿಟಿಯ ರೆಸ್ಟೊರೆಂಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದರ ಕುರಿತು ಆರೋಪಿಸಲಾಗಿದೆ.
ಹ್ಯಾರಿಸ್ ಪುತ್ರನಿಂದ ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ವತ್ ಈಗ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ವತ್‌ನ ಸಹಾಯಕ್ಕೆ ಬಂದ ಸಹೋದರ ಸಾತ್ವಿಕ್ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ