ರೌಡಿ ನಾಗರಾಜ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿ ಆದೇಶ ಹೊರಡಿಸಿದೆ.
ಸುಮಾರು 45 ಪ್ರಕರಣಗಳಲ್ಲಿ ಭಾಗಿಯಾಗಿರುವ ನಾಗರಾಜ, ಅಪಹರಣ, ದರೋಡೆ, ಜೀವ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಪಾಲ್ಗೊಂಡಿರುವುದರಿಂದ ಆತನಿಗೆ ಜಾಮೀನು ನೀಡುವುದು ಬೇಡ ಎಂದು ಹೆಣ್ಣೂರು ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ನೆರೆಯ ರಾಜ್ಯಗಳಲ್ಲಿ ಅಡಗಿರುವ ನಾಗರಾಜ ಸುಮಾರು 500 ಸಿಮ್‌ಗಳನ್ನು ಬಳಸಿ ಸಂಬಂಧಿಕರಿಗೆ, ಕುಟುಂಬದ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ನಾಗರಾಜ ಬಂಧನಕ್ಕೆ ಜಾಲ ಬೀಸಿರುವ ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ.
ಪೊಲೀಸರು ಆರೋಪಿ ನಾಗರಾಜನ ಮನೆಯ ಮೇಲೆ ದಾಳಿ ನಡೆಸಿದಾಗ 14.80 ಕೋಟಿ ರೂಪಾಯಿಗಳಷ್ಟು ಹಳೆಯ ನೋಟುಗಳು, ಮಾರಕಾಸ್ತ್ರಗಳು ಮತ್ತು ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.