Webdunia - Bharat's app for daily news and videos

Install App

ರಾಜ್ಯ ಫುಟ್ಬಾಲ್ ಮೈದಾನದಲ್ಲೇ ರೌಡಿ ಶೀಟರ್ ಕೊಚ್ಚಿ ಕೊಲೆ

Webdunia
ಭಾನುವಾರ, 12 ಸೆಪ್ಟಂಬರ್ 2021 (21:24 IST)
ಬೆಂಗಳೂರು: ಫುಟ್ಬಾಲ್ ತಂಡ ಒಂದನ್ನು ನಿರ್ವಹಿಸುತ್ತಿದ್ದ 27 ವರ್ಷದ ರೌಡಿ ಶೀಟರ್ ಒಬ್ಬನನ್ನು ಭಾನುವಾರ ಸಂಜೆ ಫುಟ್ಬಾಲ್ ಕ್ರೀಡಾಂಗಣದಲ್ಲಿ ಕೊಚ್ಚಿ  ಕೊಲೆ ಮಾಡಲಾಗಿದೆ. ಹಾಡುಗಲೇ ನೆಡೆದ ಕೊಲೆಗೆ ರಾಜಧಾನಿಯ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.
 
ಮೃತ ರೌಡಿ ಶೀಟರ್ ನನ್ನು ಅರವಿಂದ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ ಸಂಜೆ 4 ಗಂಟೆಯ ಸುಮಾರಿಗೆ ಫುಟ್ಬಾಲ್ ಮೈದಾನದೊಳಗೆ 4 ರಿಂದ 5 ಜನರ  ದುಷ್ಕರ್ಮಿಗಳ ಗುಂಪು ಬೆನ್ನಟ್ಟಿ ರೆಫರಿ ಕೋಣೆಯಲ್ಲಿ ಕೊಲೆಮಾಡಲಾಗಿದೆ.
 
ರೆಫರಿ ರೂಮ್ ನಲ್ಲಿ ಕೋಲ್ಡ್ ಬ್ಲಡೆಡ್ ಮರ್ಡರ್ : 
 
ಉಪ ಪೊಲೀಸ್ ಆಯುಕ್ತ (ಕೇಂದ್ರ) ಅನುಚೇತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ ಅರವಿಂದ  ಕೆಎಸ್‌ಎಫ್‌ಎ ಫುಟ್‌ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ  ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಆಡಲು ಬಂದಿದ್ದರು.  ಸಂಜೆ 4 ಗಂಟೆ ಸುಮಾರಿಗೆ 4 ರಿಂದ 5 ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ ನನ್ನು ಸುತ್ತುವರೆದಿದ್ದಾರೆ. ನಂತರ ಆತ ಸ್ಥಳದಿಂದ ಪರಾರಿಯಾಗಿ ಕೆಎಸ್‌ಎಫ್‌ಎ ಫುಟ್‌ಬಾಲ್ ಕ್ರೀಡಾಂಗಣವನ್ನು ಪ್ರವೇಶಿಸಿ ರೆಫರಿಯ ಕೊಠಡಿಯೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ.  ಆದರೂ ಬಿಡದ ಆರೋಪಿಗಳು ಬಾಗಿಲು ಮುರಿದು ಮಾರಕ ಆಯುಧಗಳನ್ನು ಬಳಸಿ ಕೊಲೆ ಮಾಡಿದ್ದಾರೆ.
ಎಂದು ಮಾಹಿತಿ ನೀಡಿದರು.
 
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಕೊಲೆಗೆ ಗ್ಯಾಂಗ್ ಗಳ ಮದ್ಯ ಹಳೆಯ ವೈಷಮ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಅರವಿಂದ್ ರೌಡಿ ಶೀಟರ್ ಆಗಿದ್ದಾನೆ ಹಾಗೂ ಕೆಲ ದಿನಗಳ ಹಿಂದೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ  ಎಂದು ಕೇಂದ್ರ ವಿಭಾಗದ ಡಿ.ಸಿ.ಪಿ ಹೇಳಿದರು.
 
ಆಟಗಾರರು ಮತ್ತು ಪ್ರೇಕ್ಷಕರು ಅರವಿಂದರನ್ನು ಸಶಸ್ತ್ರ ಪುರುಷರು ಮೈದಾನದಲ್ಲಿ ಅಟ್ಟಿಸಿಕೊಂಡು ಹೋಗುವುದನ್ನು ನೋಡಿ ಆಘಾತಕ್ಕೆ ಒಳಗಿದ್ದಾರೆ.  ಈ ಸಮಯದಲ್ಲಿರಾಜ್ಯ ಫುಟ್ ಬಾಲ್ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿಯೇ ಡಿವಿಷನ್ ಫುಟ್ಬಾಲ್ ಪಂದ್ಯಾವಳಿ ನೆಡೆಯುತ್ತಿದ್ದು. ಪಂದ್ಯದ ಆರಂಭಕ್ಕೆ ಕೆಲವೇ ನಿಮಿಷದ ಆರಂಭಕ್ಕೋ ಕೆಲ ನಿಮಿಷಗಳ ಮೊದಲು ಮರ್ಡರ್ ನೆಡೆದಿದೆ ಎಂದು ಅನುಚೇತ್ ತಿಳಿಸಿದರು. 
murder

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments