ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು 850 ಕೋಟಿ ಬೆಲೆಬಾಳುವ 13 ಎಕರೆ ಸರ್ಕಾರಿ ಸ್ವತ್ತು ಕಬಳಿಕೆ ಮಾಡಿರುವ ಬಗ್ಗೆ 600 ಪುಟಗಳ ದಾಖಲೆ ಬಿಡುಗಡೆ ಮಾಡಿರುವ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್ ಹಾಗೂ ಎಸಿಎಂಎಂ ನ್ಯಾಯಾಲಯಲ್ಲಿ ದೂರು ದಾಖಲಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ, ತಹಸೀಲ್ದಾರರು, ಆಯುಕ್ತರು, ಬಿಡಿಎ ನಗರ ಯೋಜನಾಧಿಕಾರಿ, ಬಿಬಿಎಂಪಿ ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಸರ್ಕಾರಿ ಭೂಮಿ ಕಬಳಿಕೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ಸೃಷ್ಠಿ, ವಂಚನೆ ಮಾಡಿರುವ ಬಗ್ಗೆಯೂ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೆ.ಜೆ.ಜಾರ್ಜ್ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್ ಟೆಕ್‍ಪಾರ್ಕ್ ನಿರ್ಮಾಣದ ಹೆಸರಿನಲ್ಲಿ 850 ಕೋಟಿ ಬೆಲೆಬಾಳುವ 13 ಎಕರೆಯಷ್ಟು ಸರ್ಕಾರಿ ಸ್ವತ್ತನ್ನು ಒತ್ತುವರಿ ಮಾಡಲಾಗಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.