ಡಿಸೆಂಬರ್ 20 ರಿಂದ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.
ಒಮಿಕ್ರಾನ್ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
ದೇಶದ 6 ಮುಖ್ಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಕಾಣಿಸಿದ ಹಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇದೇ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪತ್ತೆಹಚ್ಚಲಾಗುವುದು. ಬೆಂಗಳೂರು, ಕೊಲ್ಕತ್ತಾ, ಮುಂಬೈ, ದೆಹಲಿ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ.
ಏರ್ ಸುವಿಧಾ ಪೋರ್ಟಲ್‌ನಲ್ಲಿ ವಿದೇಶಿ ಪ್ರವಾಸಿಗರು ನೋಂದಣಿ ಮಾಡಿಕೊಳ್ಳಬೇಕಿದೆ. ಅತಿ ಹೆಚ್ಚು ಸೋಂಕು ಇರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಕ್ವಾರೆಂಟೀನ್ ಕಡ್ಡಾಯವಾಗಿದೆ.