ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಮುಂದುವರಿಸಿರುವ ನಡುವೆಯೇ ಕಣ್ಣಿಗೆ ಕಾಣದಷ್ಟು ವೇಗವಾಗಿ ೧೦೦೦ ಕಿ.ಮೀ. ದೂರದಲ್ಲಿರುವ ಗುರಿಯನ್ನು ನಿಖರವಾಗಿ ತಲುಪಬಲ್ಲ ಹೈಪರ್ ಸಾನಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ.
ಮಾಸ್ಕೊ ಶನಿವಾರ ಈ ವಿಷಯ ಘೋಷಿಸಿದ್ದು, ಬರ್ನೆಟ್ ಸಮುದ್ರ ಪ್ರದೇಶದಲ್ಲಿ ಪರೀಕ್ಷೆ ನಡೆಸಲಾಗಿದ್ದು, ನಿಗದಿತ ಗುರಿಯನ್ನು ತಲುಪಿದೆ ಎಂದು ತಿಳಿಸಿದೆ.