ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಯಾವುದೇ ಲಾಭವಾಗದಿರುವ ಹಿನ್ನೆಲೆಯಲ್ಲಿ ಅವರ ಅಳಿಯನ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ವಿಪಕ್ಷಗಳನ್ನು ಬಗ್ಗುಬಡಿಯಲು ಇಂತಹ ದಾಳಿಗೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಬಂದಾಗಲೂ ಎಸ್.ಎಂ.ಕೃಷ್ಣ ಅವರನ್ನು ಕಡೆಗೆಣಿಸಿದ್ದರು. ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಕೊಡಲಿಲ್ಲ. ಕೇವಲ ಅವರ ಪ್ರಭಾವವನ್ನು ಬಳಸಿಕೊಂಡು ಬಿಜೆಪಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಗುಡುಗಿದ್ದಾರೆ.
ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ನಿವಾಸ, ಕಚೇರಿ ಮತ್ತು ರೆಸಾರ್ಟ್‌ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ನಾಳೆಯೂ ದಾಳಿ ಮುಂದುವರಿಯಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.