Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಸ್.ಎಂ.ಕೃಷ್ಣ ಬಿಜೆಪಿ, ಜೆಡಿಎಸ್ ಪಕ್ಷ ಸೇರ್ಪಡೆ ಸತ್ಯಕ್ಕೆ ದೂರ: ಸಚಿವ ಜಯಚಂದ್ರ

ಎಸ್.ಎಂ.ಕೃಷ್ಣ ಬಿಜೆಪಿ, ಜೆಡಿಎಸ್ ಪಕ್ಷ ಸೇರ್ಪಡೆ ಸತ್ಯಕ್ಕೆ ದೂರ: ಸಚಿವ ಜಯಚಂದ್ರ
ಬಾಗಲಕೋಟೆ , ಗುರುವಾರ, 2 ಫೆಬ್ರವರಿ 2017 (11:46 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸೇರುತ್ತಾರೆ ಎನ್ನುವುದು ಶುದ್ಧ ಸುಳ್ಳು ಎಂದು ಕಾನೂನು ಹಾಗೂ ಸಂಸದೀಯ ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
 
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದಿಲ್ಲ. ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರನ್ನು ಕಡೆಗಣಿಸಿಲ್ಲ. ಹಿರಿಯರಿಗೆ ತಮ್ಮನಾಗಿ, ಕಿರಿಯರಿಗೆ ಅಣ್ಣನಾಗಿ ಪಕ್ಷ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರಬೇಕು ಎಂದು ಕಾನೂನು ಹಾಗೂ ಸಂಸದೀಯ ಖಾತೆ ಸಚಿವ ಟಿ.ಬಿ.ಜಯಚಂದ್ರ ಒತ್ತಾಯಿಸಿದರು.
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನವರಿ 28ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳ ಜೊತೆ ಗೂಂಡಾವರ್ತನೆ ತೋರಿದ ಕಾಂಗ್ರೆಸ್ ಶಾಸಕ ಬಾವಾ