Publish Date: Fri, 14 Nov 2025 (13:29 IST)
Updated Date: Fri, 14 Nov 2025 (13:31 IST)
ಬೆಂಗಳೂರು: ವೃಕ್ಷಮಾತೆ ಎಂದೇ ಕರೆಯಿಸಿಕೊಂಡಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮೃತಪಟ್ಟಿದ್ದಾರೆ.
ಕಳೆದ ಕೆಲವು ಸಮಯದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅವರಿಗೆ 118 ವರ್ಷ ವಯಸ್ಸಾಗಿತ್ತು. 1911 ರ ಜೂನ್ 30 ರಂದು ಜನಿಸಿದ್ದಅವರು ಮದುವೆಯಾಗಿದ್ದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ಮಕ್ಕಳಿಲ್ಲದ ದುಃಖ ಮರೆಯಲು ರಸ್ತೆ ಬದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಮಕ್ಕಳಿಲ್ಲದ ಕೊರಗನ್ನು ಮರೆಯುತ್ತಿದ್ದರು.
ಅನರಕ್ಷಸ್ಥೆಯಾಗಿದ್ದರೂ ಸಮಾಜದ ಮುಂದಿನ ಪೀಳಿಗೆ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದ ತಿಮ್ಮಕ್ಕ ಸಾಧನೆಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳು ಅರಸಿ ಬಂದಿದ್ದವು. ಅವರ ಸಾಧನೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಕನ್ನಡ ನಾಡಿನ ಜನ, ಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.