Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸದಾನಂದ ಗೌಡರಿಗೆ ರಾಜ್ಯದಲ್ಲಿ ದೊಡ್ಡ ಸ್ಥಾನ: ಡಿಸಿಎಂ ಅಶ್ವಥ್ ನಾರಾಯಣ್ ಸುಳಿವು

ಸದಾನಂದ ಗೌಡರಿಗೆ ರಾಜ್ಯದಲ್ಲಿ ದೊಡ್ಡ ಸ್ಥಾನ: ಡಿಸಿಎಂ ಅಶ್ವಥ್ ನಾರಾಯಣ್ ಸುಳಿವು
bangalore , ಬುಧವಾರ, 7 ಜುಲೈ 2021 (17:45 IST)
ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡರು ಬೇರೆಯವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಆದರೆ ಅವರಿಗೆ ರಾಜ್ಯದಲ್ಲಿ ದೊಡ್ಡ ಸ್ಥಾನ ಸಿಗಬಹುದು ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.
ರಾಮನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಆದರೆ ಮುಂದೆ ರಾಜ್ಯದ ಸಿಎಂ ಆಗುವ ವಿಚಾರ ಗೊತ್ತಿಲ್ಲ. ಅದರ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ ನಾನು ಎಂದು ಜಾರಿಕೊಂಡರು.
ಸದಾನಂದ ಗೌಡರಿಗೆ ಪಕ್ಷದ, ರಾಜ್ಯ, ರಾಷ್ಟ್ರದಲ್ಲಿ ಯಾವುದೇ ಅಧಿಕಾರ ಕೊಡಬಹುದು. ಆದರೆ ಈಗಿನ ಸಿಎಂ ಬದಲಾವಣೆ ಚರ್ಚೆಗೂ ಸದಾನಂದ ಗೌಡರ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಸ್ಪಷ್ಪಪಡಿಸಿದರು.
ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಮತ್ತು ಯೋಗೇಶ್ವರ್ ಪದೇಪದೆ ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ರಾಜ್ಯದಲ್ಲಿ ಸಿಎಂ ಇದ್ದಾರೆ, ಹಾಗಾಗಿ ಆ ವಿಚಾರ ಬೇಕಿಲ್ಲ. ಯಾರೂ ಕೂಡ ಸಾರ್ವಜನಿಕವಾಗಿ ಹೇಳಿಕೆ ಕೊಡಬಾರದು. ನಮ್ಮ ಪಕ್ಷದ ಹೈಕಮಾಂಡ್ ವೀಕ್ ಆಗಿಲ್ಲ. ನಮ್ಮ ಪಕ್ಷದಲ್ಲಿ ಶಕ್ತಿಯಿದೆ, ಪಕ್ಷದ ವರಿಷ್ಠರು ಈ ಬಗ್ಗೆ ಗಮನಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
 
 
 
 
ನನಗೆ 82 ವರ್ಷ ವಯಸ್ಸಾಗಿದ್ದು, ನಾನು ಸಚಿವನಾಗಲು ಅನರ್ಹನಾಗಿದ್ದೇನೆ ಎಂದು ತುಮಕೂರು ಹಿರಿಯ ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟಿದ್ದಾರೆ. 
 
ಕೇಂದ್ರ ಸಂಪುಟ ಪುನಾರಚನೆಯಲ್ಲಿ ನಿಮಗೆ ಸಚಿವ ಸ್ಥಾನ ಕೈತಪ್ಪಿದೆಯಲ್ಲ ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಸಂಸದ ಜಿ.ಎಸ್.ಬಸವರಾಜು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.  81 ವರ್ಷದ ನನಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದಾರೆ. ದೇವೇಗೌಡರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ನನಗೆ ಮಂತ್ರಿಗಿರಿಗಿಂತ ಹೆಚ್ಚು ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಹಿರಿಯ ಸಂಸದನಾಗಿರೋದು ಸತ್ಯ. ಆದರೆ ನನಗೆ ವಯಸ್ಸಾಗಿರೋದ್ರಿಂದಲೇ ಮಂತ್ರಿಗಿರಿ ತಪ್ಪಿದೆ ಹೊರತು ಬೇರೆಕಾರಣದಿಂದಲ್ಲ. ಎಂದು ಪ್ರತಿಕ್ರಿಯಿಸಿದ್ದಾರೆ.
ಶೋಭಾ ಕರಂದ್ಲಾಜೆಗೆ ಮಂತ್ರಿ ಸ್ಥಾನ ಸಿಕ್ಕಿರೋದು ಖುಷಿಯ ವಿಚಾರ ಆಕೆ ಧೈರ್ಯಶಾಲಿ ಮಹಿಳೆಯಾಗಿದ್ದಾಳೆ. ಅದರಂತೆ ಸದಾನಂದ ಗೌಡರೂ ಒಳ್ಳೆಯವರು ಆದರೂ ಸಂಪುಟ ಪುನಾರಚನೆ ಅನಿವಾರ್ಯವಾಗಿದ್ದರಿಂದ ಅವರು ರಾಜೀನಾಮೆ ಕೊಡಬೇಕಾಯಿತು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ತೈಲ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ