Publish Date: Fri, 18 Oct 2019 (12:06 IST)
Updated Date: Fri, 18 Oct 2019 (12:07 IST)
ತುಮಕೂರು : ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ಕೆ.ಬಿ ಸಿದ್ದಯ್ಯ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತುಮಕೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಸಿದ್ದಯ್ಯ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧುಬಳಗ, ಶಿಷ್ಯರನ್ನು ಅಗಲಿದ್ದಾರೆ.
ದಲಿತ ಚಳುವಳಿಯಲ್ಲಿ ತೊಡಗಿಕೊಂಡಿದ್ದ ಸಿದ್ದಯ್ಯ ಅವರು ಸಿದ್ದಾರ್ಥ್ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಹಲವು ಕಾವ್ಯಗಳನ್ನು ರಚಿಸುತ್ತಿದ್ದ ಸಿದ್ದಯ್ಯ ಅವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ.