ರಾಜ್ಯದ ಈ ಜಿಲ್ಲೆಯಲ್ಲಿ ಜಾರಿ ಮಾಡಲಾಗಿರುವ ಲಾಕ್ ಡೌನ್ ಗೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗತೊಡಗಿದೆ.
ಬೀದರ್ ಜಿಲ್ಲೆಯಲ್ಲಿ covid-19 ಸೋಂಕು ದಿನದಿಂದ ದಿನಕ್ಕೆ ಪ್ರಬಲಗೊಳ್ಳುತ್ತಿದ್ದು ಇಲ್ಲಿಯವರೆಗೆ ಒಟ್ಟು 1130 ಪ್ರಕರಣಗಳು ಪತ್ತೆಯಾಗಿವೆ. 53 ಸೋಂಕಿತರು ಬಲಿಯಾಗಿದ್ದಾರೆ.
ಕೊರೋನಾ ಸೋಂಕು ಹರಡುವಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್ ಡೌನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕೆ.ಎಸ್.ಆರ್.ಟಿ. ಸಿ. ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕೆಲವೊಂದು ಅನಿವಾರ್ಯ ಕೆಲಸಗಳಿಗೆ ಓಡಾಡುವದನ್ನು ಬಿಟ್ಟರೆ ರಸ್ತೆಯಲ್ಲಿ ಜನರ ಓಡಾಟ ಸಂಪೂರ್ಣವಾಗಿ ಸ್ಥಗಿತವಾಗಿದೆ.
ಅಗತ್ಯ ವಸ್ತುಗಳಾದ ಹಣ್ಣು ತರಕಾರಿ ಕಿರಾಣಿ ಅಂಗಡಿ ಗಳು ಬೆಳಗ್ಗೆ 5.00 ಗಂಟೆಯಿಂದ 11.00 ಗಂಟೆಯವರೆಗೆ ಮಾತ್ರ ತೆರೆದಿದ್ದವು. ಉಳಿದೆಲ್ಲಾ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ.