Publish Date: Fri, 20 Jan 2023 (07:14 IST)
Updated Date: Fri, 20 Jan 2023 (08:52 IST)
ಮೈಸೂರು : ಪ್ರಗತಿಪರ ಹೋರಾಟಗಾರರು ಹಾಗೂ ಸಮಾಜವಾದಿ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್ (85) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆ ಬಳಿಕ ವೈದ್ಯರು ತಿಳಿಸಿದ್ದಾರೆ.