ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ನಲ್ಲಿ ಬಂದಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಎಲ್ಲಾ ಆರೋಪಿಗಳ ಕೂದಲು ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.
ರಾಹುಲ್ ಥೋನ್ಸೆ, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಸೇರಿದಂತೆ ಎಲ್ಲಾ ಆರೋಪಿಗಳ ಕೂದಲು ಪರೀಕ್ಷೆ ನಡೆಸಿ ಅವರು ಡ್ರಗ್ ತೆಗೆದುಕೊಂಡಿರುವುದಕ್ಕೆ ಸಾಕ್ಷ್ಯ ಕಲೆ ಹಾಕಲಾಗುತ್ತದೆ. ಸದ್ಯದಲ್ಲೇ ಈ ಮಾದರಿಗಳನ್ನು ಹೈದರಾಬಾದ್ ಗೆ ಕಳುಹಿಸಿಕೊಡಲಾಗುತ್ತಿದ್ದು, ಪರೀಕ್ಷೆ ನಡೆಸಲಾಗುತ್ತದೆ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ.