ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಗೂ ಬಿಜೆಪಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸೆಪ್ಟೆಂಬರ್ 27 ರಂದು ನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಯಿಂದ ಬಿಜೆಪಿಗೆ ತೊಂದರೆಯಾಗಲಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಿಸುವುದೇ ನಮ್ಮ ಗುರಿಯಾಗಿದೆ. ಇದೊಂದು ರಾಜಕೀಯೇತರ ಸಂಘಟನೆಯಾಗಿದೆ ಎಂದರು.
ರಾಯಣ್ಣ ಬ್ರಿಗೇಡ್ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಮೊದಲಿನಂತೆ ರೋಷವಿಲ್ಲ. ಇದೀಗ ಬ್ರಿಗೇಡ್‌ನ ಉದ್ದೇಶವನ್ನು ತಿಳಿದ ನಂತರ ಮೌನವಾಗಿದ್ದಾರೆ. ಯಡಿಯೂರಪ್ಪನವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊ