Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಬಸವರಾಜ ಹೊರಟ್ಟಿ

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಬಸವರಾಜ ಹೊರಟ್ಟಿ
bengaluru , ಭಾನುವಾರ, 26 ಜೂನ್ 2022 (19:09 IST)
ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು.
 
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು.
 
ಏಕೀಕರಣ ಹೋರಾಟ ಉದ್ದೇಶ ಸಹಬಾಳ್ವೆ.
ಏಕೀಕರಣ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ. ಉಮೇಶ್ ಕತ್ತಿ‌ 2009 ರಲ್ಲಿ ಹೀಗೆಯೇ ಹೇಳಿದ್ದ, ಆಗ ಮುಖ್ಯಮಂತ್ರಿ ತಾನೇ ಆಗುವೆ ಅಂತ ಹೇಳಿದ್ದ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಕೇಳೋಣ. ಅನ್ಯಾಯ ಸರಿಪಡಿಸಲು ಕೇಳೋಣ. ಅದು ಬಿಟ್ಟು ಈ ರಾಜ್ಯ ವಿಭಜನೆ ಹೇಳಿಕೆ ಸರಿಯಲ್ಲ ಎಂದು ಹರಿಹಾಯ್ದರು.
 
ಪಠ್ಯ ಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪಠ್ಯ ಪರಿಷ್ಕರಣ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ.
ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯ ಪುಸ್ತಕ ಪರಿಷ್ಕರಣ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಭಾಗವಹಿಸುವುದು ಸರಿಯಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.
 
ಇನ್ನು ರಾಜ್ಯ ಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಾರೆ‌. ಶಿಕ್ಷಕರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮಿಂದ ಕಿತ್ತುಕೊಂಡಿದ್ದನ್ನೇ ಕೇಳಿದರೆ ಕೋಪ, ಸಿಟ್ಟು: ಸಿದ್ದರಾಮಯ್ಯ