ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀ ಸವದಿ ಅವರು ತಿಳಿಸಿದ್ದಾರೆ.