Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶಶಿಕಲಾರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬ್ಯುಲೆನ್ಸ್ ಮೂಲಕ ಶಶಿಕಲಾರನ್ನು ಕರೆತರಲಾಗಿದೆ. ಅವರಿಗೆ ಮಧುಮೇಹ, ರಕ್ತೊದತ್ತಡ ಸಮಸ್ಯೆಯೂ ಇದೆ. ಸದ್ಯಕ್ಕೆ ಅವರಿಗೆ ಆಂಟಿ ಬಯೋಟಿಕ್ಸ್ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.