Publish Date: Fri, 06 Sep 2019 (13:57 IST)
Updated Date: Fri, 06 Sep 2019 (14:00 IST)
ಮಂಗಳೂರು : ದ.ಕ. ಜಿಲ್ಲೆಯ ದಕ್ಷಾ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2017 ಅಕ್ಟೋಬರ್ ನಿಂದ ಸೆಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ ಅನಿಸುತ್ತಿಲ್ಲ. ಸಂವಿಧಾನದ ಮೂಲ ಆಶಯಗಳು ಕಾಣೆಯಾಗುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಾಧ್ಯತೆಯಿದೆ. ಜೊತೆಗೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಸಿಕಾಂತ್ ತಿಳಿಸಿದ್ದಾರೆ.