ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ, ಸಚಿವ ಸತೀಶ್ ಜಾರಕಿಹೊಳಿ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.
ಇಂದು ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗುವುದು ಸರ್ವೇ ಸಾಮಾನ್ಯ. ಅದರ ಆಧಾರದ ಮೇಲೆ ಸಿಎಂ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ. ವಿಪಕ್ಷಗಳೂ ಪ್ರೀತಿಯಿಂದ ನನ್ನ ಹೆಸರು ಹೇಳುತ್ತಿರಬಹುದು. ಆದರೆ ಪಕ್ಷದಲ್ಲಿ ಆ ರೀತಿಯ ಯಾವ ಬೆಳವಣಿಗೆಯೂ ಆಗಿಲ್ಲ ಎಂದರು.