Select Your Language

Notifications

webdunia
webdunia
webdunia
webdunia

ಸತೀಶ್​​ ವಿವಾದಾತ್ಮಕ ಹೇಳಿಕೆ ವೈರಲ್

Satish's controversial statement went viral
bangalore , ಶುಕ್ರವಾರ, 11 ನವೆಂಬರ್ 2022 (19:01 IST)
ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದರು. ಧರ್ಮವೀರ ಮಹಾರಾಜರನ್ನು ಏಕೆ ಹತ್ಯೆ ಮಾಡಿದರು? ಅವರು ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಿದ್ದರು. ಹೀಗಾಗಿ ಅವರನ್ನು ಹಿಡಿದು ಬ್ರಿಟಿಷರು ಹತ್ಯೆ ಮಾಡಿದರು ಎಂದು ವಿವಾದಾತ್ಮಕವಾಗಿ ಹೇಳಿಕೆಯನ್ನು ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಓರ್ವ ಭಯೋತ್ಪಾದಕನ ಹತ್ಯೆ