ಕೇರಳದ ಶಬರಿಮಲೈನಲ್ಲಿನ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ನ್ಯಾಯಾಲಯದ ತೀರ್ಪು ಪುನರ್ ಪರಿಶೀಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ತುಮಕೂರಿನಲ್ಲಿ ಅಯ್ಯಪ್ಪ ಭಕ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಜಮಾಯಿಸಿದ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ನೇತೃತ್ವದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. 'ಸೇವ್ ಶಬರಿಮಲೆ' ಘೋಷಣೆಯಡಿ ನಡೆದ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಿದ್ದುದು ಗಮನರ್ಹವಾಗಿತ್ತು.
ಅಯ್ಯಪ್ಪ ಸ್ವಾಮಿ ಭಜನೆ ಮಾಡುತ್ತ ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದರು. ಸಮೀಪದಲ್ಲೇ ಇದ್ದ ಅರಳಿ ಮರದ ಬಳಿ ಅಯ್ಯಪ್ಪ ಸ್ವಾಮಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡದಂತೆ ಸಂಪ್ರದಾಯವನ್ನು ಪಾಲನೆ ಮಾಡಿಕೊಂಡು ಬರಲಾಗಿದೆ.
ಏಕಾಏಕಿ ಅದರ ವಿರುದ್ಧ ಹೋಗಬಾರದು, ವೈಜ್ಞಾನಿಕವಾಗಿ ದೇಗುಲದಲ್ಲೂ ಸಂಪ್ರದಾಯವನ್ನು ಪಾಲಿಸಿಕೊಂಡು ಬರಲಾಗುತ್ತಿದೆ. ಇದನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಒತ್ತಾಯಿಸಿದರು.