Publish Date: Thu, 22 Dec 2022 (10:27 IST)
Updated Date: Thu, 22 Dec 2022 (10:29 IST)
ಬೆಳಗಾವಿ : ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಶತಾಬ್ದಿ ಸೂಪರ್ ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ರೈಲುಗಳ ವೇಳಾಪಟ್ಟಿಯ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ರೈಲ್ವೆ ಮಂತ್ರಾಲಯವನ್ನು ಪತ್ರ ಮುಖೇನ ಕೋರಲಾಗಿದೆ. ರೈಲ್ವೆ ಅಧಿಕಾರಿಗಳು ಇದು ಕಷ್ಟ ಅನ್ನುತ್ತಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ರೈಲ್ವೆ ಸಚಿವರೊಂದಿಗೆ ಚರ್ಚಿಸಿ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡ್ಯದಲ್ಲಿ ಈ ಎರಡೂ ರೈಲುಗಳಿಗೂ ಸಹ ನಿಲುಗಡೆ ಒದಗಿಸಬೇಕೆಂಬ ಸದಸ್ಯರ ಕೋರಿಕೆಯ ಬಗ್ಗೆಯೂ ಅಗತ್ಯ ಕ್ರಮಕೈಗೊಳ್ಳುವಂತೆ ಮಂತ್ರಾಲಯಕ್ಕೆ ಪತ್ರದ ಮುಖೇನ ತಿಳಿಸಲಾಗಿದೆ ಎಂದು ವಿವರಿಸಿದರು.