Publish Date: Thu, 15 Jun 2023 (20:00 IST)
Updated Date: Thu, 15 Jun 2023 (19:01 IST)
ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಶಾಲಾ ಬಸ್ಗೆ ಬೆಂಕಿ ಬಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಶಾಲೆಯ ಬಸ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಮಕ್ಕಳನ್ನು ಬಸ್ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
geetha
Publish Date: Thu, 15 Jun 2023 (20:00 IST)
Updated Date: Thu, 15 Jun 2023 (19:01 IST)