Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರನಲ್ಲಿ ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಪೋಷಕರ ಗುಂಪು ಮಹಿಳಾ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ಕಳವಳಕಾರಿ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪೊಂದು ಶಾಲೆಗೆ ಆಗಮಿಸಿ, ಮುಖ್ಯೋಪಾಧ್ಯಾಯರ ಕೊಠಡಿ ಮುಂದೆ ಜಮಾಯಿಸಿ, ತದನಂತರ ಶಿಕ್ಷಕರ ಕೊಠಡಿಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.