Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
೬ ರಿಂದ ೧೨ ತರಗತಿ ಸಂಪೂರ್ಣ ಓಪನ್ ಆಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ನಡೆಸಲು ಹೇಳಿದ್ದೇವೆ. ಆದ್ರೆ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು., ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದೇವೆ.
ದಸರಾ ಆದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಪಾಸಿಟಿವ್ ರೇಟ್ ಕಡಿಮೆ ಇದೆ. ಹಾಗಾಗಿ ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದು ಶಾಲೆ ತರೆದಿರುವುದರ ಪರ ಮಾತನಾಡಿದ್ದಾರೆ.