Publish Date: Sat, 30 Oct 2021 (14:14 IST)
Updated Date: Sat, 30 Oct 2021 (14:17 IST)
ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ಇಂದು (ಅ.30) ರಜೆ ಘೋಷಿಸಲಾಗಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಪುನೀತ್ ರಾಜಕುಮಾರ್ರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ತಂದೆಯ ಹಾದಿಯಲ್ಲೇ ಸಾಗಿರುವ ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.