ರಾಜ್ಯ ಸೇರಿದಂತೆ ರಾಜಧಾನಿ ಮಂದಿಯನ್ನು ಮಳೆರಾಯ ಬಿಟ್ಟು ಬಿಡದೇ ಕಾಡುತ್ತಿದ್ದಾನೆ. ಈ ನಡುವೆ ಮಳೆಯಿಂದಾಗಿ ತರಕಾರಿ ಬೆಳೆ ಗಗನ ಮುಟ್ಟಿವೆ.
ಮಾರುಕಟ್ಟೆಗೆ ಬರುತ್ತಿದ್ದ ತರಕಾರಿಗಳ ಪ್ರಮಾಣ ಕಡಿಮೆಯಾಗಿದೆ. ದುಡ್ಡು ಕೊಟ್ಟರೂ ಉತ್ತಮ ತರಕಾರಿ ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ಬಹುತೇಕ ತರಕಾರಿಗಳ ಧಾರಣೆ 15 ರೂ. ನಿಂದ 20 ರೂ.ಗೆ ಹೆಚ್ಚಾಗಿದೆ.
ಅಕ್ಕಪಕ್ಕದ ರಾಜ್ಯಗಳಿಗೂ ಬೆಂಗಳೂರು ಮಾರುಕಟ್ಟೆಯಿಂದ ತರಕಾರಿ ಕಳಿಸಲಾಗುತ್ತಿತ್ತು. ಆದರೆ ಇದೀಗ ಬೆಂಗಳೂರಿಗೆ ಬರುವ ತರಕಾರಿ ಪ್ರಮಾಣ ಕಡಿಮೆಯಾಗಿರುವ ಕಾರಣ ಇತರೆ ರಾಜ್ಯಗಳಿಗೆ ಕಳಿಸಲು ಅಗುತ್ತಿಲ್ಲ ಎನ್ನುವುದಯ ವ್ಯಾಪಾರಸ್ಥರ ಮಾತಾಗಿದೆ.