Select Your Language

Notifications

webdunia
webdunia
webdunia
webdunia

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವು

Student dies while playing Ludo, incident in Mangalore
Photo Courtesy X
ಮಂಗಳೂರು: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡೋ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದ ಪ್ಲಾಸ್ಟಿಕ್ ಕೋನನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಭಾನುವಾರ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ, ರಾಜೇಶ್ವರಿ ದಂಪತಿಯ ಪುತ್ರಿ ತನುಷ್ಕ ಮೃತ ಬಾಲಕಿ. ಸಹೋದರ, ಸಹೋದರಿ ಜೊತೆ ಲೂಡೋ ಆಟ ಆಡುತ್ತಿದ್ದಾಗ ಶಂಕು ಆಕಾರದ ಲೂಡೋ ಕಾಯಿನ್‍ನ್ನು ಬಾಲಕಿ ನುಂಗಿದ್ದಳು. ಇದರಿಂದ ಏಕಾಏಕಿ ಉಸಿರುಗಟ್ಟಿ, ಬಾಳಕಿ ಗಂಭೀರ ಸ್ಥಿತಿ ತಲುಪಿದ್ದಳು.  

ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೋ ಆಟದಲ್ಲಿ ತೊಡಗಿದ್ದಳು.

 ಈ ವೇಳೆ ತನುಷ್ಕ ಲೂಡೋ ಆಟದಲ್ಲಿ ಬಳಸಲಾಗುವ ಹೊಸ ಕೋನ್ ಮಾದರಿಯ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.

ಬಾಲಕಿಯ ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಶ್ವಾಸಕೋಶದ ಭಾಗದಲ್ಲಿ ಪ್ಲಾಸ್ಟಿಕ್ ಆಟದ ಕಾಯಿ ಸಿಲುಕಿರುವುದು ಪತ್ತೆಯಾಗಿದೆ. ಮೃತ ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬೆಸ್ಟಿಯನ್ ಶಾಲೆಯಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ಧಿಡೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಕಂಗಾಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ: ಐಎಸ್‌ಐ, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌