Publish Date: Mon, 07 Sep 2020 (10:34 IST)
Updated Date: Mon, 07 Sep 2020 (10:36 IST)
ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ.
ಇಂದಿನಿಂದ ಶುರುವಾಗಲಿರುವ ದ್ವಿತೀಯ ಪಿಯು ಪೂರಕ ಪರೀಕ್ಷೆ ಸೆಪ್ಟಂಬರ್ 19ರವರೆಗೆ ನಡೆಯಲಿದೆ. ಒಟ್ಟು 305 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಒಟ್ಟು 2,12,652 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದೆ.