ಕೊಮ್ಮಘಟ್ಟದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಭದ್ರತೆ ದೃಷ್ಟಿಯಿಂದ ಎಸ್ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯ ನಡೆಯುತ್ತಿದೆ ಸಿಎಂ ಬೊಮ್ಮಾಯಿ ಹೇಳಿದರು. ಈ ವೇಳೆ ಕೊಮ್ಮಘಟ್ಟದಲ್ಲಿ ನಡೆಯಲಿರುವ ಮೋದಿ ಕಾರ್ಯಕ್ರಮದ ಸಿದ್ದತಾ ಕಾರ್ಯ ಪರಿಶೀಲಿಸಿದ ನಂತ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಗಬೇಕು ಎನ್ನುವ ಕಾರಣಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳು, ಕೇಂದ್ರದ ಮಾಜಿ ಸಚಿವ ಸದಾನಂದನಗೌಡ,ಎಲ್ಲಾ ಶಾಸಕರು ಬಹಳಷ್ಟು ಶ್ರಮವಹಿಸುತ್ತಿದ್ದಾರೆ. ಬಿಬಿಎಂಪಿ, ಬಿಡಿಎ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ಭದ್ರತೆ ದೃಷ್ಟಿಯಿಂದ ಬೆಂಗಳೂರ ನಗರ ಪೊಲೀಸ್ ಆಯುಕ್ತರು,ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಮಾರ್ಗಸೂಚಿ ರೂಪಿಸಲಾಗಿದೆ. ಸಮಾರಂಭದ ವೇದಿಕೆಯಹೊರಾಂಗಣದಲ್ಲಿ ಭಾಗಿಯಾಗುವವರಿಗೆ ಲಸಿಕೆಯ ಎರಡು ಡೋಸ್ ಸರ್ಟಿಫಿಕೇಟ್ ಸಾಕು ಆದರೆ ಒಳಾಂಗಣದ ವ್ಯಾಪ್ತಿಯ ಒಳಗಡೆ ಇದ್ದವರಿಗೆ ಕೋವಿಡ್ ನೆಗಟಿವ್ ವರದಿಕಡ್ಡಾಯವಾಗಿದೆ ನಾನು ಕೂಡ ಕೋವಿಡ್ ತಪಾಸಣೆ ಮಾಡಿಸಿಯೇ ಸಮಾರಂಭದಲ್ಲಿ ಭಾಗಿಯಾಗುತ್ತೇನೆ ಎಂದರು.