ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಜರುಗಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ, ಲೈಟಿಂಗ್ ವ್ಯವಸ್ಥೆ ಸೇರಿದಂತೆ ಸೂಕ್ತ ಬಂದೋ ಬಸ್ತು ಮಾಡಲಾಗಿದೆ ಎಂದಿದ್ದಾರೆ.
ಹೊಸ ವರ್ಷದ ಆಚರಣೆಯ ಭದ್ರತೆಗಾಗಿ ಒಟ್ಟು ಐದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಸಮಾಜಘಾತುಕ ಶಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಇದಕ್ಕಾಗಿ 300 ಸಿಸಿ ಕ್ಯಾಮೆರಾ ಮತ್ತು ಡ್ರೋಣ್‍ಗಳನ್ನು ಇಡಲಾಗಿದೆ ಎಂದು ವಿವರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.