Webdunia - Bharat's app for daily news and videos

Install App

ಫ್ರೀ ಇದ್ರೆ ಸಿಗ್ತೀರಾ ಎಂದು ಉಪನ್ಯಾಸಕಿಯರಿಗೆ ಅಶ್ಲೀಲ ಮೆಸೇಜ್: ಕಾಮುಕ ಅರೆಸ್ಟ್

Webdunia
ಶುಕ್ರವಾರ, 27 ಜನವರಿ 2017 (14:56 IST)
ನಾಲ್ವರು ಉಪನ್ಯಾಸಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾಮುಕ ಸೆಕ್ಯೂರಿಟಿ ಗಾರ್ಡ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹೇಂದ್ರ ಎಂಬಾತ ಬಂಧಿತ ಕಾಮುಕ ಆರೋಪಿಯಾಗಿದ್ದು, ಮಲ್ಲೇಶ್ವರಂನ ಖಾಸಗಿ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ ತನ್ನದೇ ಕಾಲೇಜಿನ ನಾಲ್ವರು ಉಪನ್ಯಾಸಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿ ಪೀಡಿಸುತ್ತಿದ್ದ ಎನ್ನಲಾಗಿದೆ. 
 
ಇಂಟರ್‌ನೆಟ್ ಬಳಸಬೇಕು ಎಂದು ವಿದ್ಯಾರ್ಥಿಗಳಿಂದ ಮೊಬೈಲ್ ಪಡೆದುಕೊಂಡು ಆರೋಪಿ ಮಹೇಂದ್ರ ನಾಲ್ವರು ಉಪನ್ಯಾಸಕಿಯರಿಗೆ ಐ ಲವ್ ಯು, ಐ ಮಿಸ್ ಯು, ಫ್ರೀ ಇದ್ದರೆ ಸಿಗ್ತೀರಾ ಅಂತೆಲ್ಲಾ ಸಂದೇಶ ಕಳುಹಿಸುತ್ತಿದ್ದ. ಈ ಕುರಿತು ಉಪನ್ಯಾಸಕಿಯರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 
 
ಮೆಸೇಜ್ ಬಂದಿದ್ದ ನಂಬರ್ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆಗ ಮೊಬೈಲ್‌‌ನ್ನು ಸೆಕ್ಯೂರಿಟಿ ಗಾರ್ಡ್‌ಗೆ ಕೊಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ. 
 
ಸಂದೇಶ ಬಂದಿರುವ ನಂಬರ್‌ನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆಗ, ಸೆಕ್ಯೂರಿಟಿ ಗಾರ್ಡ್ ಎಸಗಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ. 
 
ತಕ್ಷಣ ಸೆಕ್ಯೂರಿಟಿ ಗಾರ್ಡ್ ಮಹೇಂದ್ರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ದೃಷ್ಕೃತ್ಯ ಎಸಗಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments