ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ನದಿಗೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಅಧಿಕ ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಜಲಾಶಯದ 33 ಗೇಟ್‌ಗಳ ಪೈಕಿ 30 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗಿದೆ. ವಿಶ್ವವಿಖ್ಯಾತ ಹಂಪಿಯ ಪುರಂದರ ಮಂಟಪ ಮುಳುಗಡೆಯಾಗಿದೆ. ರಾಮಲಕ್ಷಣ ದೇವಸ್ಥಾನಕ್ಕೆ ಹೋಗುವ ದಾರಿ ಮತ್ತೆ ಜಲಾವೃತವಾಗಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ನದಿಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಅಪಾಯ ಇದ್ರೂ ಜಲಾಶಯದ ಬಳಿ ಜನರು ಮೋಜು ಮಸ್ತಿ ಮಾಡ್ತಿದ್ದಾರೆ.ನದಿ ನೀರಿನ ಬ್ರಿಡ್ಜ್ ಮೇಲೆ ನಿಂತು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ.