ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಮುಖ್ಯಮಂತ್ರಿ ಸ್ಥಾನ ಇಬ್ಬರ ನಡುವೆ ಹಂಚಿಕೆಯಾಗುತ್ತದೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಆಪ್ತ, ಶಾಸಕ ಹೆಚ್.ಸಿ ಮಹದೇವಪ್ಪ ಅಧಿಕಾರ ಹಂಚಿಕೆ ಕೇವಲ ಅಂತೆ ಕಂತೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದೇ ಅಂತಿಮ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರೋದು ನನಗೆ ಖುಷಿ ತಂದಿದೆ. ಡಿಕೆ ಶಿವಕುಮಾರ್ ಸೇರಿ ಅನೇಕ ನಾಯಕರು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಆದರೆ ಒಬ್ಬರಿಗೆ ಸಿಎಂ ಸ್ಥಾನ ಕೊಡಲು ಸಾಧ್ಯ. ವರಿಷ್ಠರು ಎಲ್ಲವನ್ನೂ ಅಳೆದು ತೂಗಿ ತೀರ್ಮಾನ ಮಾಡಿದ್ದಾರೆ. ಅವಲೋಕನದ ಬಳಿಕವೇ ಸಿದ್ದರಾಮಯ್ಯಗೆ ಹೊಣೆ ನೀಡಲಾಗಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುವುದರಲ್ಲಿ ತಪ್ಪಿಲ್ಲ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.