Publish Date: Wed, 27 May 2020 (20:52 IST)
Updated Date: Wed, 27 May 2020 (20:54 IST)
ಹೊರಗಡೆಯಿಂದ ಬಂದವರನ್ನು ಸಾಧ್ಯವಾದಷ್ಟು ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲು ಕ್ರಮ ಕೈಗೊಳ್ಳಬೇಕು.
ಹೀಗಂತ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚಾಗುತ್ತಿರುವುದರಿಂದ ಅಂತಹವರನ್ನು ಪ್ರತ್ಯೇಕವಾಗಿರಿಸುವುದರಿಂದ ಕ್ವಾರಂಟೈನ್ ನಲ್ಲಿ ಇರುವ ಇತರರಿಗೆ ಸೋಂಕುಗಳು ಹರಡುವುದನ್ನು ತಪ್ಪಿಸಬಹುದು ಎಂದಿದ್ದಾರೆ.
ಹೊರ ರಾಜ್ಯಗಳಿಂದ ಬರುವವರನ್ನು ಗಡಿ ಭಾಗಗಳಲ್ಲಿಯೇ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ದೃಢಪಟ್ಟವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ನೆಗೆಟೀವ್ ಬಂದವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸುವಂತೆ ಅವರು ನಿರ್ದೇಶನ ನೀಡಿದರು.