Webdunia - Bharat's app for daily news and videos

Install App

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು: ಬಡವರ ಸಾವಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಲೆ ಇಲ್ಲ

Sampriya
ಭಾನುವಾರ, 17 ನವೆಂಬರ್ 2024 (12:10 IST)
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವುಗಳ ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಜಿಲ್ಲಾ ಸಚಿವರಾದ ಜಮೀರ್ ಅಹ್ಮದ್‌ ಅವರು ಮಾತ್ರ ಅತ್ತ ಕಡೆ ತಲೆ ಹಾಕುತ್ತಿಲ್ಲ ಎಂದು ಜೆಡಿಎಸ್‌ ಪ್ರಶ್ನಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ ಜೆಡಿಎಸ್‌, ಜಿಲ್ಲೆಯಲ್ಲಿ ಇಷ್ಟೆಲ್ಲಾ ಸಮಸ್ಯೆ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕೇರಳದಲ್ಲಿ ಪ್ರವಾಸದಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

 ಬಡವರ ಸಾವಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಲೆ ಇಲ್ಲವಾಗಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೂವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಆದರೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್ ಅಹ್ಮದ್‌ ಜಾಲಿ ಮೂಡ್‌ನಲ್ಲಿದ್ದಾರೆ.

ಜಿಲ್ಲಾ ಉಸ್ತುವಾರಿ ಹೊಣೆಹೊತ್ತಿರುವ ಜಮೀರ್‌ ಅವರಿಗೆ, ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಲು ಸಮಯ ಇಲ್ಲವಾಗಿದೆ. ಆದರೆ ಕೇರಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರಿಗೆ ಟೈಮ್‌ ಇದೆ. ಜನರ ಕಷ್ಟ ಆಲಿಸದ ಇಂತಹವರು ಸಚಿವರಾಗಲು ನಾಲಾಯಕ್‌.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments