ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಾಳೆ.
ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್ನಾ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್ಗಳಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್ಗಯಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಈ ಸಂಬಂಧ ಸ್ನೇಹಲ್ ಲೋಖಂಡೆ ಅವರು ಯುವತಿ ನನಗೆ ಪರಿಚಯವಷ್ಟೇ, ಆದರೆ ಆಕೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಹೀಗಾಗಿ ಯುವತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.