Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹರ್ಷಿ ವಾಲ್ಮೀಕಿ ಅವರ ಆದರ್ಶ ತತ್ವಗಳನ್ನು ಅಳವಡಿಸಿಕೊಂಡಾಗ ಜಯಂತಿ ಆಚರಣೆ ಸಾರ್ಥಕ

ಮಹರ್ಷಿ ವಾಲ್ಮೀಕಿ ಅವರ ಆದರ್ಶ ತತ್ವಗಳನ್ನು ಅಳವಡಿಸಿಕೊಂಡಾಗ ಜಯಂತಿ ಆಚರಣೆ ಸಾರ್ಥಕ
ಕಲಬುರಗಿ , ಬುಧವಾರ, 24 ಅಕ್ಟೋಬರ್ 2018 (21:59 IST)
ರಾಮಾಯಣ ಕಾವ್ಯ ರಚನೆಯ ಹರಿಕಾರ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಮತ್ತು ತತ್ವವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಕವಿಗಳ ಜಯಂತಿ ಆಚರಣೆಂಯು ಸಾರ್ಥಕವಾಗುತ್ತದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಈ ರೀತಿ ಅಭಿಪ್ರಾಯಪಟ್ಟರು.
ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ  ವಾಲ್ಮೀಕಿ ಅವರ ಜಯಂತ್ಯೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಇಂದಿನ ಯುವ ಜನಾಂಗ ಮಹರ್ಷಿ ವಾಲ್ಮೀಕಿ ಅವರ ಮಾರ್ಗದಲ್ಲಿ ಸಾಗಬೇಕಿದೆ. ಭಗವಂತ ಶ್ರೀರಾಮನನ್ನು ರಾಮಾಯಾಣ ಮಹಾಕಾವ್ಯದ ಮೂಲಕ ಜಗತ್ತಿಗೆ ದರ್ಶನ ಮಾಡಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಇಂತಹ ಮಹಾನ್ ಕವಿಗಳ ಆಚಾರ ವಿಚಾರಗಳು ಹೆಚ್ಚಿನ ರೀತಿಯಲ್ಲಿ ಪಸರಿಸಲು ಅವರ ಮೂರ್ತಿಯನ್ನು ಕಲಬುರಗಿ ನಗರದ ರಾಮ ಮಂದಿರ ವೃತ್ತದಲ್ಲಿ ಮಹಾನಗರ ಪಾಲಿಕೆಯಿಂದ ಸ್ಥಾಪಿಸಬೇಕು ಹಾಗೂ ವಾಲ್ಮೀಕಿ ಸಮುದಾಯದವರು ಸಭೆ-ಸಮಾರಂಭಗಳನ್ನು ಆಯೋಜಿಸಲು ಅನುವಾಗುವಂತೆ ನಗರದಲ್ಲಿ “ವಾಲ್ಮೀಕಿ ಸಮುದಾಯ ಭವನ” ಸಹ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ತಾವು ಸಕಲ ರೀತಿಯ ನೆರವು ನೀಡುವುದಾಗಿ ಶಾಸಕರು ಹೇಳಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಆರೋಪ ಮುಕ್ತನಾಗಿ ಮತ್ತೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷಗಾದಿಗೇರಿದ ರಾಮಕೃಷ್ಣ