Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಿಷೇಧಾಜ್ಞೆ ಉಲ್ಲಂಘಿಸಿ ಕಲಬುರಗಿ ನಗರದಲ್ಲಿ ಅನೇಕ ಸಂಘಟನೆಗಳ ಪ್ರತಿಭಟನೆ

ನಿಷೇಧಾಜ್ಞೆ ಉಲ್ಲಂಘಿಸಿ ಕಲಬುರಗಿ ನಗರದಲ್ಲಿ ಅನೇಕ ಸಂಘಟನೆಗಳ ಪ್ರತಿಭಟನೆ
ಕಲಬುರಗಿ , ಗುರುವಾರ, 19 ಡಿಸೆಂಬರ್ 2019 (11:02 IST)
ಕಲಬುರಗಿ : ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಕಲಬುರಗಿ ನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.


ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಹಲವು ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ರಾಜ್ಯಾದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಆದರೂ ಕೂಡ ಕಲಬುರಗಿ ನಗರದಲ್ಲಿ ಅನೇಕ ಸಂಘಟನೆಗಳು ನಿಷೇಧಾಜ್ಞೆ ಉಲ್ಲಂಘಿಸಿ ಕಲಬುರಗಿ ನಗರದ ನಗರೇಶ್ವರ ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 

ಗುಂಪಾಗಿ ನಿಂತಿದ್ದ ಜನರನ್ನು ಪೊಲೀಸರು ಚೆದುರಿಸುತ್ತಿದ್ದು,  ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ, ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿ  ಬೈಕ್ ರ್ಯಾಲಿ ತಡೆದರೂ , ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ ಮುಂದೆ ಸಾಗಿದ್ದಾರೆ. ಆದಕಾರಣ ಪ್ರತಿಭಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ-ಸಿಎಂ ಆರೋಪ