ನವದೆಹಲಿ: ತೀವ್ರವಾದ ಬೇಸಿಗೆಯ ಶಾಖ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ನೈಋತ್ಯ ಮಾನ್ಸೂನ್ ಮಳೆಯ ನಂತರ, ಈ ಚಳಿಗಾಲದಲ್ಲಿ ತೀವ್ರವಾದ ಚಳಿ ವಾತಾವರಣದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಲಾ ನಿನಾ ಎಫೆಕ್ಟ್ ಕಾರಣವಾಗಲಿದೆ ಎಂದು ಹೇಳಲಾಗಿದೆ.
ಮಾನ್ಸೂನ್ ನಂತರದ ಅವಧಿಯಲ್ಲಿ (ಅಕ್ಟೋಬರ್-ಡಿ) ದಕ್ಷಿಣ ಪೆನಿನ್ಸುಲರ್ ಭಾರತ, ಮಧ್ಯ ಭಾರತ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಸಾಮಾನ್ಯ ಸರಾಸರಿಗಿಂತ ಹೆಚ್ಚಿನ ಮಳೆಯನ್ನು IMD ಊಹಿಸಿದೆ.
ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-NCR ಸೇರಿದಂತೆ ಉತ್ತರ ಮತ್ತು ವಾಯುವ್ಯ ಭಾರತದಲ್ಲಿ ಸಂಭಾವ್ಯ ತೀವ್ರ ಚಳಿಗಾಲದ ಮುನ್ಸೂಚನೆ ನೀಡಿದೆ. IMD ಮುಖ್ಯಸ್ಥ ಮೃತ್ಯುಂಜಯ್ ಮಹಾಪಾತ್ರ ಅವರು ಈ ಅವಧಿಯಲ್ಲಿ ಈ ಪರಿಸ್ಥಿತಿಗಳು ಬೆಳೆಯುವ ಸಾಧ್ಯತೆ 71% ಎಂದು ಹೇಳಿದ್ದಾರೆ.<>