Publish Date: Sun, 28 Aug 2022 (09:26 IST)
Updated Date: Sun, 28 Aug 2022 (09:48 IST)
ಚಿತ್ರದುರ್ಗ : ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ.
ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ.
ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಬಳಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರು ದಾಖಲಾಗಿದೆ. ಪ್ರಕರಣ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ.
ಸಂತ್ರಸ್ತೆಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆತಂದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ.