Publish Date: Wed, 17 Oct 2018 (08:51 IST)
Updated Date: Wed, 17 Oct 2018 (08:53 IST)
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಮೇಲೆ ಕೆಲವು ಪುಂಡರು ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಾಗಿದೆ.
ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಹಲವು ಮಹಿಳೆಯರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮೇಲಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ.
ಪಾನಮತ್ತರಾಗಿ ಬಂದಿದ್ದ ಯುವಕರ ಗುಂಪು ವಿನಾಕಾರಣ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹಲವು ಮಹಿಳೆಯರು ಟ್ವಿಟರ್, ಫೇಸ್ ಬುಕ್ ಮೂಲಕ ದೂರಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.