Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!
ಯಾದಗಿರಿ , ಶುಕ್ರವಾರ, 12 ನವೆಂಬರ್ 2021 (21:03 IST)
ಯಾದಗಿರಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಸಂಬಂಧ ಕರ್ತವ್ಯಲೋಪ ಹಿನ್ನೆಲೆ ಪ್ರಭಾರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರ್ದಾರ್ ಸಸ್ಪೆಂಡ್ ಆದವರು. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಯಾದಗಿರಿ ತಾಲೂಕಿನ ಮುಂಡರಗಿ ಬಳಿಯಿರುವ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡುವುದಾಗಿ ಆಮಿಷಯೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ನಿನ್ನೆ ಹಯ್ಯಾಳಪ್ಪ ವಿರುದ್ಧ ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಪೊಲೀಸರು ಹಯ್ಯಾಳಪ್ಪ ಜಾಗೀರ್ದಾರ್ರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ಯಾದಗಿರಿ ಎಸ್ಪಿ ಡಾ. ವೇದಮೂರ್ತಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟೈಪ್-2 ಡಯಾಬಿಟೀಸ್ ರೋಗಿಗಳಲ್ಲಿ ರೋಗಿಗಳಲ್ಲಿ ಅತಿಯಾದ ಆಯಾಸ-ಅಧ್ಯಯನದಲ್ಲಿ ದೃಢ