ಕಲಬುರಗಿ: ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಮನೆ ಕೆಲಸದಾಕೆ ನೀಡಿದ ದೂರಿನ ಅನ್ವಯ ಇದೀಗ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಹೊಳೆನರಸೀಪುರದಲ್ಲಿ ನಗರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್ ತನಿಖೆಯನ್ನ ಎಸ್‌ಐಟಿ ತೀವ್ರಗೊಳಿಸಿದ್ದು ಇದರಲ್ಲಿ ರೇವಣ್ಣ ಅವರು A1 ಆರೋಪಿಯಾಗಿದ್ದಾರೆ.
ಹೀಗಾಗಿ ಇಂದು ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಎರಡು ದಿನ ಸಮಯ ಕೇಳೋ ಸಾಧ್ಯತೆ ಇದೆ. ಆದರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು ರೇವಣ್ಣ ಗೆ ಬಂಧನದ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಈಗಾಗಲೇ ಲುಕ್ಔಟ್ ನೋಟಿಸ್ ನೀಡಲಾಗಿದೆ, ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ, ಹೀಗಾಗಿ ಅರೆಸ್ಟ್ ಮಾಡಲು ಎಸ್‌ಐಟಿ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.